ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸಲಾದ ಸೂರ್ಯ ಹೈಟ್ಸ್‌ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

ವನ್ನು ಇದೇ ಮೇ 12, 2024 ರಂದು ನಗರದ ಬ್ಯಾಟರಾಯನಪುರದಲ್ಲಿ ನಿಗದಿಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರನ್ನು ಆಹ್ವಾನಿಸಲಾಗುತ್ತಿದ್ದು, ಅದ್ಧೂರಿಯಾಗಿ ಸಮಾರಂಭವನ್ನು ನಡೆಸಲಾಗುತ್ತಿದೆ. ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆಯ ಆಧ್ಯಾತ್ಮಿಕ ಗುರುಗಳಾದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮ

ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸಲಾದ ಸೂರ್ಯ ಹೈಟ್ಸ್‌ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಹಾಸ್ವಾಮೀಜಿಯವರು ಈ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಚ್ಚನ್ಯಾಯಾಲಯದ ಮಾಜಿ ನ್ಯಾಯಮೂರ್ತಿಗಳಾದ ಶಿವರಾಜ್‌ ಪಾಟೀಲ್‌, ಮಾಜಿ ಮುಖ್ಯ ಮಂತ್ರಿಗಳಾದ ಬಸವರಾಜ ಎಸ್‌ ಬೊಮ್ಮಾಯಿ, ಎಸ್ ಎಸ್ ಮಲ್ಲಿಕಾರ್ಜುನ (ಗಣಿ ಮತ್ತು ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರು, ಕರ್ನಾಟಕ ಸರ್ಕಾರ), ಶ್ರೀ ಬೈರತಿ ಸುರೇಶ್ (ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು, ಕರ್ನಾಟಕ ಸರ್ಕಾರ), ಡಾ ಜಿ ಎಂ ಸಿದ್ದೇಶ್ವರ (ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರು, ದಾವಣಗೆರೆ), ಶ್ರೀ ಬಿ ವೈ ವಿಜಯೇಂದ್ರ (ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಶಾಸಕರು ಶಿಕಾರಿಪುರ) ರವರು ಆಗಮಿಸಲಿದ್ದಾರೆ.ಈ ಕುರಿತಾಗಿ ಮಾಹಿತಿ ನೀಡಿದ ಸೂರ್ಯ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕರಾದ ವಿಶ್ವನಾಥ್ ಬಾಥಿ ಅವರು ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಅತ್ಯುತ್ತಮ ಸೌಲಭ್ಯಗಳೊಂದಿಗೆ ಉತ್ತಮ ಸ್ಥಳಾವಕಾಶ ಸೃಷ್ಟಿಸಲಾಗಿದ್ದು, ಉದ್ಯಮಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *