ಪ್ರಜ್ವಲ್ ರೇವಣ್ಣಗೆ ಕೇಂದ್ರದಿಂದಲೂ ಶೋಕಾಸ್ ನೋಟಿಸ್

ನವದೆಹಲಿ- ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಇದೀಗ ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಕಾರಣ ಕೇಳಿ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ.ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು, ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕೆಂಬ ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ಸರ್ಕಾರದಿಂದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವ ಬಗ್ಗೆ ಪತ್ರ ಬಂದಿದ್ದು, ಅದರಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *