ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಹೆಚ್. ಡಿ. ರೇವಣ್ಣ

ಹೈ ಕೋರ್ಟ್ ನಿಂದ ಜಾಮೀನು ಪಡೆದ ಬಳಿಕ ಹೆಚ್. ಡಿ. ರೇವಣ್ಣ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಷೇಶ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ರಾತ್ರಿಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿರುವ ರೇವಣ್ಣ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟೆಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಹೆಚ್. ಡಿ. ರೇವಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ : – ರಾಜ್ಯದಲ್ಲಿ ರಸ್ತೆ ಅಪಘಾತಕ್ಕೆ 51 ಬಲಿ – ಸುರಕ್ಷಿತ ವಾಹನ ಚಾಲನೆಗೆ ಅಲೋಕ್ ಕುಮಾರ್ ವಿನಂತಿ

Leave a Reply

Your email address will not be published. Required fields are marked *