BENGALURU- ಜೂನ್‌ 1 ರಿಂದ BMTC ವಿದ್ಯಾರ್ಥಿಗಳಿಗೆ ಬಸ್‌‍ ಪಾಸ್ ವಿತರಣೆ

2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌‍ ಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇಂದಿನಿಂದ ಆನ್‌ ಲೈನ್‌ ಮೂಲಕ ಅರ್ಜಿ ಸ್ವೀಕರಿಸುತ್ತಿದ್ದು, ಜೂನ್‌ 1 ರಿಂದ ವಿದ್ಯಾರ್ಥಿ ಪಾಸ್‌‍ ಗಳನ್ನು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿತರಣೆ ಮಾಡುಲಾಗುತ್ತದೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಅರ್ಜಿಯು ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪಾಸುಗಳನ್ನು ಬೆಳಿಗ್ಗೆ 8 ರಿಂದ ಸಂಜೆ 6.30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್‌‍ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್‌ ಸಿಟಿ ಘಟಕ-19, ಶಾಂತಿನಗರ ಟಿಟಿಎಂಸಿ, ಕೆಎಸ್‌‍ ಆರ್‌ಟಿಸಿಯ ಆನೇಕಲ್‌ ಬಸ್‌‍ ನಿಲ್ದಾಣದಲ್ಲಿ ವಿತರಿಸುವುದಾಗಿ ಹೇಳಿದೆ. ಇದನ್ನೂ ಓದಿ : – ಸಮಗ್ರ ಅಭಿವೃದ್ಧಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ

ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದ್ದು, ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಸ್ ಪಾಸ್ ​​​ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ 08022483777 ಮೂಲಕ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ : – ಕೇವಲ ರಾಹುಲ್ ಗಾಂಧಿ ಬಗ್ಗೆ ಯಾಕೆ ಮಾತಾಡ್ತಿದ್ದೀರಿ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Leave a Reply

Your email address will not be published. Required fields are marked *