ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ – ಡಿಕೆಶಿ

ಬಿಜೆಪಿ ಪಕ್ಷ ಆಡಳಿತದಲ್ಲಿದ್ದ ವೇಳೆ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿರುವಂತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಗೆ ಹೇಳಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡರ ಪರವಾಗಿ ಕನಕಪುರ ನಿವಾಸದಲ್ಲಿ ಮತಯಾಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್‌ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ” ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಆಡಳಿತದ ಅವಧಿಯಲ್ಲಿ ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳಿಗೆ ಸಮವಸ್ತ್ರದ ಬದಲು ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತು ಈಗ ನಮಗೆ ಪಾಠ ಹೇಳಲು ಬರುತ್ತಿರುವುದು ಅವರ ಕಾರ್ಯವೈಖರಿ ಎಂತದ್ದು ಎಂದು ತೋರಿಸುತ್ತದೆ ಎಂದು ಹೇಳಿದರು.

ಇದೇ ವೇಳೆ ವಾಲ್ಮೀಕಿ ನಿಗಮದ ಹಣ ದುರುಪಯೋಗ ಹಾಗೂ ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಕ್ಷ ಜೂನ್ 6 ರವರೆಗೆ ಗಡವು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ ಬೇಡ ಎಂದವರು ಯಾರು? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕಾಗಿತ್ತೊ ಅದನ್ನು ಮಾಡದೇ ಬೇಡದ ವಿಷಯದ ಬಗ್ಗೆ ಮಾತನಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಈ ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶದ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ಈಶ್ವರಪ್ಪ ಪ್ರಕರಣಕ್ಕೂ ಇದಕ್ಕೂ ಒಂದೇ ಎಂದು ಹೇಳಲಾಗದು ಎಂದು ತಿಳಿಸಿದರು. ಇದನ್ನೂ ಓದಿ : – ವಾಣಿಜ್ಯ ಬಳಕೆಯ ಸಿಲಿಂಡರ್ ದರ 69.50 ರೂ. ಇಳಿಕೆ

ಸಂಸದ ಪ್ರಜ್ವಲ್ ರೇವಣ್ಣ ಬಂಧನದ ಬಗ್ಗೆ ಮಾಧ್ಯಮಗಳ ವೀಕ್ಷಣೆಯಿಂದ ತಿಳಿದು ಬಂದಿದ್ದು ಈ ವಿಚಾರವಾಗಿ ಎಸ್‌ ಐಟಿ ಪ್ರಕರಣ ತನಿಖೆ ನಡೆಸುತ್ತಿದೆ. ಇದರ ಬಗ್ಗೆ ನಾನೇಕೆ ತಲೆಕೆಡಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : – ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

Leave a Reply

Your email address will not be published. Required fields are marked *