ಪಶ್ಚಿಮ ಬಂಗಾಳದಲ್ಲಿ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಏಳನೇ ಹಂತದಲ್ಲಿ ಮತದಾನ ನಡೆದಿದೆ. ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದೆ. ಬಿಹಾರ, ಚಂಡೀಗಡ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂಜಾನೆ ಏಳು ಗಂಟೆಯಿಂದ ಮತದಾನ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ನಾಯಕರು, ಸಿನಿಮಾ ರಂಗದ ದಿಗ್ಗಜರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಕೋಲ್ಕತ್ತಾ ಬಳಿಯ ಜಾದವ್ ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಐಎಸ್ಎಫ್ ಸದಸ್ಯರು ಗಾಯಗೊಂಡಿದ್ದಾರೆ. ಅಲ್ಲದೇ ನಾಡ ಬಾಂಬ್ಗಳ ಎಸೆತದಿಂದ ಘರ್ಷಣೆ ಇನ್ನೂ ಹೆಚ್ಚಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ, ಚುನಾವಣಾ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಜನಸಮೂಹ ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿರುವ ಘಟನೆ ನಡೆದಿದೆ. ಇದನ್ನೂ ಓದಿ : – ವಾಲ್ಮೀಕಿ ನಿಗಮದ ಎಂಡಿ, ಅಕೌಂಟೆಂಟ್ ಬಂಧನ

ಕೆಲವು ಮತಗಟ್ಟೆ ಏಜೆಂಟರನ್ನು ಬೂತ್ ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಜನಸಮೂಹ್ನ ಬಲವಂತವಾಗಿ ಮತಗಟ್ಟೆಯೊಳಗೆ ನುಗ್ಗಿ ಅಲ್ಲಿದ್ದ ವಿವಿಪಿಎಟಿ ಹಾಗೂ ಇವಿಎಂ ಅನ್ನು ಹತ್ತಿರದ ಕೆರೆಗೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : – KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳಾಮಣಿಗಳ ಕಿತ್ತಾಟ