ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಕಿತ್ತಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಜ್ಯ ಸರಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ.

ಸಾಗರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ಸಿನಲ್ಲಿ ಇಬ್ಬರು ಮಹಿಳೆಯರು ಸೀಟಿಗಾಗಿ ಜಗಳ ಮಾಡಿಕೊಂಡಿದ್ದಾರೆ, ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿದೆ. ಈ ನಡುವೆ ಬಸ್ಸಿನ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಜಗಳ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಕೊನೆಗೆ ಬಸ್ ಚಾಲಕ ಮಹಿಳೆಯರ ಗಲಾಟೆ ನಿಯಂತ್ರಿಸಲಾಗದೆ ಬಸ್ಸನ್ನು ಸಾಗರ ಪಟ್ಟಣ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ. ಗಲಾಟೆ ನಡೆಸಿದ ಮಹಿಳೆಯರನ್ನು ಬಸ್ಸಿನಿಂದ ಇಳಿಸಿ ಬಸ್ಸು ಶಿವಮೊಗ್ಗ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಕೊನೆಗೆ ಸಾಗರ ನಗರ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ. ಗಲಾಟೆ ಮಾಡುತ್ತಿದ್ದ ಎರಡು ಕಡೆಯವರನ್ನು ಬಸ್ ನಿಂದ ಇಳಿಸಿದ ಪೊಲೀಸರು, ಬಳಿಕ ಬಸ್ ಚಾಲನೆಗೆ ಅವಕಾಶ ನೀಡಿದ್ದಾರೆ.
ಇದನ್ನೂ ಓದಿ : – ವಾಲ್ಮೀಕಿ ನಿಗಮದ ಎಂಡಿ, ಅಕೌಂಟೆಂಟ್ ಬಂಧನ