ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.

ಮಧ್ಯಾಹ್ನ ಒಂದು ಗಂಟೆ ವೇಳೆ ಅದು ಮೂರು ಪಟ್ಟು ಹೆಚ್ಚಾಗುತ್ತದೆ ದೊಡ್ಡಮಟ್ಟದ ಲೀಡ್ ನಲ್ಲಿ ಗೆಲ್ಲುತ್ತಾರೆ . ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಡಾ ಮಂಜುನಾಥ್ ಗೆಲುವು ನಿಶ್ಚಿತ. ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣದಲ್ಲಿ ನಮ್ಮ ಪಕ್ಷದ ಶಕ್ತಿ ಹೆಚ್ಚಿದೆ. ಈಗಾಗಲೇ ಅರ್ಧ ಮತ ಎಣಿಕೆ ಮುಗಿದಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಅವರು 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಹೀಗಾಗಿ ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ ಎಂದು ಹೇಳಿದರು.
ಈ ಹಿಂದೆಯೇ ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೇವೆ. ಸ್ವತಃ ಡಾ ಮಂಜುನಾಥ್ ಅವರು ಕೂಡ ಶಾಂತಿ ಕಾಪಾಡಲು ಭದ್ರತೆ ಕೈಗೊಳ್ಳುವಂತೆ ಮನವಿ ಮಾಡಿದ್ದರು . ಇದೀಗ ಮಂಜುನಾಥ್ ಅವರು ಭಾರೀ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಗೆಲುವು ಸಾಧಿಸಲಿರುವ ಹಿನ್ನೆಲೆ ಬಿಜೆಪಿ ಕಚೇರಿಗೆ ಕಾರ್ಯಕರ್ತರು ಜಮಾವಣೆ ಆಗುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಕಾರ್ಯಕರ್ತರು ಹೆಚ್ಚುತ್ತಿದ್ದಾರೆ ಎಂದು ಮುನಿರತ್ನ ತಿಳಿಸಿದ್ದಾರೆ.
ಇದನ್ನೂ ಓದಿ : – ಆದಿಚುಂಚನಗಿರಿ ಮಠದಲ್ಲಿ ಹೆಚ್ಡಿಕೆ ವಿಶೇಷ ಪೂಜೆ ಸಲ್ಲಿಕೆ