ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಆರಂಭಿಕ ಮುನ್ನಡೆಯಲ್ಲಿದ್ದೇವೆ. ಕೊನೆ ಹಂತದವರೆಗೆ ಇದು ಹೀಗೆಯೇ ಇರಲಿದೆ. ದೇಶದಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸೀಟ್ ಗಳನ್ನು ಎನ್ಡಿಎ ಗೆಲ್ಲುವ ವಿಶ್ವಾಸವಿದೆ. ಚುನಾವಣೆಯಲ್ಲಿ ಉತ್ಸಾಹದಿಂದಲೇ ಇದ್ದೇನೆ. ಮಂಡ್ಯ ಕ್ಷೇತ್ರಕ್ಕೆ ಸೇವೆ ಮಾಡಲು ಅವಕಾಶ ಸಿಗುವುದರಲ್ಲಿ ಯಾವ ಅನುಮಾನ ಇಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ : – ರಾಜ್ಯದಲ್ಲಿ ಅಂಚೆ ಮತಗಳ ಎಣಿಕೆ ಮುಕ್ತಾಯ – 11 ಸ್ಥಾನಗಳಲ್ಲಿ BJP ಮುನ್ನಡೆ