2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಹೊತ್ತಲ್ಲೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ಕಲ್ಲುತೂರಾಟದಲ್ಲಿ ಕಿಟಕಿ ಗಾಜು ಒಡೆದಿದೆ.

ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿ, ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ.

ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ ಎಂದು ಹೇಳಿದರು. ಚಿಕ್ಕಬಳ್ಳಾಪುರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ.ಕೆ ಸುಧಾಕರ್ 95 ಸಾವಿರ ಮತಗಳಿಂದ ಭರ್ಜರಿ ಗೆಲುವು ಪಡೆದಿದ್ದಾರೆ.
ಇದನ್ನೂ ಓದಿ:– ಹಾಸನದಲ್ಲಿ ೨೫ ವರ್ಷಗಳ ನಂತರ ಕಾಂಗ್ರೆಸ್ ಗೆಲುವು, ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು