ಲೋಕಸಭಾ ಚುನಾವಣೆ ಫಲಿತಾಂಶದ ನಂತರ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಉದ್ಧವ್ ಠಾಕ್ರೆ) 9, ಎನ್‌ಸಿಪಿ( ಶರಾದ್ ಪವಾರ್) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ.

ನಂತಚ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಓಡಿಹೋಗುವ ಮನುಷ್ಯನಲ್ಲ. ಈ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ. ಸಾರ್ವಜನಿಕರ ಮಧ್ಯೆ ಹೋಗಿ ಹೊಸದಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲು ಬಯಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ. 2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು.
ಇದನ್ನೂ ಓದಿ: – ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಕೆ