Lokhasabha election – ಮೂವರು ಮಾಜಿ ಸಿಎಂಗಳು ಸಂಸತ್ ಪ್ರವೇಶ!

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ನಿಂದ ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಗೆದ್ದು ಸಂಸತ್ ಗೆ ಪ್ರವೇಶಿಸಿದ್ದಾರೆ. ಬಿಜೆಪಿಯಿಂದ ಶೆಟ್ಟರ್ ಮತ್ತು ಬೊಮ್ಮಾಯಿ ಅವರು ಗೆದ್ದಿದ್ದಾರೆ, ಈ ಮೂವರು ಎನ್‌ ಡಿಎ ಮೈತ್ರಿ ಕೂಟದವರು. ಬಿಜೆಪಿಯ ಶೆಟ್ಟರ್ ಮತ್ತು ಬೊಮ್ಮಾಯಿ ಇಬ್ಬರೂ ಇದೇ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿರುವುದು ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ.

ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ ವಿರುದ್ಧ 43,513 ಮತಗಳ ಅಂತರದಿಂದ ಗೆದ್ದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಲಾವಣೆಯಾದ ಒಟ್ಟು 13,75,285 ಮತಗಳಲ್ಲಿ 7,56,471 ಮತ ಗಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ 5,80,897 ಮತಗಳನ್ನು ಪಡೆದು ಸೋಲುಂಡರು. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಚುನಾವಣೆಯಲ್ಲಿ ಭಾಗವಹಿಸಿ ಭಾರೀ ಮತಗಳ ಅಂತರದಿಂದ ಗೆದ್ದು ಸಂಸತ್ ಗೆ ಪ್ರವೇಶ ಮಾಡಿದ್ದಾರೆ.

ಇದನ್ನೂ ಓದಿ:– ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ

Leave a Reply

Your email address will not be published. Required fields are marked *