ಲೋಕಸಭಾ ಚುನಾವಣೆಯ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಅದರ ಸಿದ್ಧತೆ ಭರದಿಂದ ಸಾಗಿದ್ದು ರಾಷ್ಟ್ರಪತಿ ಭವನದಲ್ಲಿ ಜೂನ್ 9ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಎನ್ಡಿಎ ಸತತ ಮೂರನೇ ಗೆಲುವನ್ನು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ ಇದಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಜೆ ರಾಷ್ಟ್ರಪತಿಗಳಿಗೆ ಎನ್ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: – ಒಂದೇ ವಿಮಾನದಲ್ಲಿ ನಿತೀಶ್ ಕುಮಾರ್, ತೇಜಸ್ವಿ ಯಾದವ್ ದೆಹಲಿಗೆ ಪ್ರಯಾಣ