ಉತ್ತರಾಖಂಡದಲ್ಲಿ ಸಿಲುಕ್ಕಿದ್ದ ಕರ್ನಾಟಕ ಮೂಲದ 9 ಚಾರಣಿಗರು ಸಾವು

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಮಾನದ ಮೂಲಕ ರಕ್ಷಿಸಲ್ಪಟ್ಟವರನ್ನು ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ಕಳುಹಿಸಲು ಸಿದ್ದತೆ ನಡೆಸಲಾಗಿದೆ. ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಬೆಳಗ್ಗೆ 11 ಗಂಟೆಗೆ ಎಲ್ಲಾ 9 ಮೃತದೇಹಗಳನ್ನು ವಿಮಾನದ ಮೂಲಕ ಡೆಹ್ರಾಡೂನ್‌ಗೆ ತರಲಾಗುವುದು. ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತ ಪ್ರಾರಂಭವಾಗಿ ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡು ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಮೃತಪಟ್ಟಿದ್ದಾರೆ. 

ಇದೇ ವೇಳೆ ಮೃತಪಟ್ಟ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ ರಾತುರಿ ಅವರ ಜೊತೆ ಕೃಷ್ಣಬೈರೇಗೌಡ ಮಾತುಕತೆ ನಡೆಸಿದ್ದಾರೆ. ಮಾತುಕತೆ  ಬಳಿಕ ಉತ್ತರಾಖಂಡ ಮುಖ್ಯಕಾರ್ಯದರ್ಶಿ ಚಾರ್ಟರ್ ಫ್ಲೈಟ್ ಮೂಲಕ ಮೃತದೇಹವನ್ನು ಸಾಗಿಸಲು ಒಪ್ಪಿಕೊಂಡಿದ್ದಾರೆ.

SDRF ನಿಂದ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ 11 ಚಾರಣಿಗರ ವಿವರ:
ಜೈ ಪ್ರಕಾಶ್ ವಿ.ಎಸ್ (61), ಗಿರಿನಗರ ಬೆಂಗಳೂರು ನಿವಾಸಿ
ಭರತ್ ವಿ (53), ಹಂಪಿನಗರ, ಬೆಂಗಳೂರು ನಿವಾಸಿ
ಅನೀಲ್ ಭಟ್ (52), ನಿವಾಸಿ ಜೋಪ್ ನಗರ ಬೆಂಗಳೂರು
ಮಧುಕಿರಣ್ ರೆಡ್ಡಿ (52), ಬೆಂಗಳೂರು ನಿವಾಸಿ
ಶೀನ ಲಕ್ಷ್ಮಿ (48), ಕೆ.ಆರ್.ಪುರಂ ಬೆಂಗಳೂರು ನಿವಾಸಿ
ಶೌಮ್ಯಾ ಕೆ (31), ಬೆಂಗಳೂರು ನಿವಾಸಿ
ಶಿವ ಜ್ಯೋತಿ (45), ಹೆಚ್‌ಎಸ್‌ಆರ್ ಬೆಂಗಳೂರು ನಿವಾಸಿ
ಸ್ಮೂರ್ತಿ ಪ್ರಕಾಶ್ ಡೋಲಾಸ್ (45), ಮಹಾರಾಷ್ಟ್ರದ ಪುಣೆ ನಿವಾಸಿ
ವಿನಾಯಕ್ ಎಂ.ಕೆ (47), ರೆಸಿಡೆಂಟ್ ಪ್ರೆಸ್ಟೀಜ್ ಸಿಟಿ, ಬೆಂಗಳೂರು
ಶ್ರೀರಾಮಲ್ಲು ಸುಧಾಕರ್ (64), ಬೆಂಗಳೂರು ಎಸ್‌ಆರ್‌ಕೆ ನಗರ ನಿವಾಸಿ
ವಿವೇಕ್ ಶ್ರೀಧರ್ (37), ಬೆಂಗಳೂರು,

ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಮತ್ತು ವಿಪತ್ತು ನಿರ್ವಹಣೆಯ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ನಾನು ಇಂದು ಭೇಟಿಯಾಗಿ ಈ ವಿಪತ್ತಿನ ಸಮಯದಲ್ಲಿ ಅವರ ತ್ವರಿತ ಪ್ರತಿಕ್ರಿಯೆಗಾಗಿ ಅವರಿಗೆ ಧನ್ಯವಾದ ಅರ್ಪಿಸಿದ್ದೇನೆ. ಶವಗಳನ್ನು ಬೆಂಗಳೂರಿಗೆ ಸಾಗಿಸಲು ವಿಮಾನದ ವ್ಯವಸ್ಥೆ ಮಾಡುವಂತೆಯೂ ನಾನು ಅವರ ಸಹಾಯವನ್ನು ಕೋರಿದೆ. ಅವರು ಸಹಾಯ ಮಾಡಲು ಒಪ್ಪಿಕೊಂಡಿದ್ದಾರೆ. ಎಲ್ಲಾ 9 ಮೃತದೇಹಗಳು ಮಧ್ಯಾಹ್ನ 12 ಗಂಟೆಗೆ ಡೆಹ್ರಾಡೂನ್ ತಲುಪುವ ಸಾಧ್ಯತೆಯಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಎಂಬಾಮ್ ಮಾಡಿದ ನಂತರ ನಾವು ಇಂದು ಎಲ್ಲಾ ಮೃತದೇಹಗಳನ್ನು ವಿಮಾನ ಮೂಲಕ ಬೆಂಗಳೂರಿಗೆ ರವಾನಿಸಲು ಯೋಜಿಸುತ್ತಿದ್ದೇವೆಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

Leave a Reply

Your email address will not be published. Required fields are marked *