ನಾಳೆ ಬೆಂಗಳೂರಿನ ನ್ಯಾಯಾಲಯಕ್ಕೆ ರಾಗಾ ಹಾಜರ್

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನ ಸಂಸದ ರಾಹುಲ್‌ ಗಾಂಧಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ರವರು ಜೂ. ೧ ರಂದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.

ರಾಹುಲ್‌ ಗಾಂಧಿ ಅವರ ಹಾಜರಾತಿಗೆ ವಿನಾಯಿತಿ ನೀಡಿದ್ದ ನ್ಯಾಯಾಲಯ ಜೂ. ೭ ರಂದು ರಾಹುಲ್‌ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಿರಬೇಕು ಎಂದು ಸೂಚನೆ ನೀಡಿದೆ. ಅದರಂತೆ ರಾಹುಲ್‌ಗಾಂಧಿ ಅವರು ನಾಳೆ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ. ೪೦ ರಷ್ಟು ಕಮಿಷನ್ ಆರೋಪ ಮಾಡಿ ದರ ಪಟ್ಟಿ ಜಾಹೀರಾತು ಪ್ರಕಟಿಸಿದ್ದ ಕಾಂಗ್ರೆಸ್‌ ನ ವಿರುದ್ಧ ಬಿಜೆಪಿಯ ಆಗಿನ ಕಾರ್ಯದರ್ಶಿ ಕೇಶವ್‌ ಪ್ರಸಾದ್ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮ್ಮೆ ಪ್ರಕರಣವನ್ನು ದಾಖಲಿಸಿದ್ದರು.

ಇದನ್ನೂ ಓದಿ: – ಉತ್ತರಾಖಂಡದಲ್ಲಿ ಸಿಲುಕ್ಕಿದ್ದ ಕರ್ನಾಟಕ ಮೂಲದ 9 ಚಾರಣಿಗರು ಸಾವು

Leave a Reply

Your email address will not be published. Required fields are marked *