ಬೆಂಗಳೂರು ಏರ್‌ ಪೋರ್ಟಗೆ – ಎಲೆಕ್ಟ್ರಿಕ್ ಟ್ಯಾಕ್ಸಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ರಿಫೆಕ್ಸ್ ಇವೀಲ್ಜ್ ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದಂದು ನೂತನವಾಗಿ ‘ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿ’ಗಳನ್ನು ಪರಿಚಯಿಸಿದೆ. 

ವಿಶ್ವ ಪರಿಸರ ದಿನಾಚರಣೆಯಂದು ಒಟ್ಟು 75 ಕಾಂಪ್ಯಾಕ್ಟ್ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿ ಬಳಿಕ ಮಾತನಾಡಿದ ಹರಿ ಮರಾರ್, ಏರ್‌ಪೋರ್ಟ್ ನಲ್ಲಿ ಪರಿಸರಯುಕ್ತ ವಾತಾವರಣ ನಿರ್ಮಾಣ ಮಾಡಲು ಈ ಪರಿಸರ ದಿನದಂದೇ ಬಹುತೇಕ ಇಂಧನಯುಕ್ತ ಟ್ಯಾಕ್ಸಿಗಳನ್ನು ಎಲೆಕ್ಟ್ರಿಕ್ ಟ್ಯಾಕ್ಸಿಗಳಾಗಿ ಪರಿವರ್ತಿಸಲಾಗಿದೆ. ಇದೀಗ 75 ಕಾಂಪ್ಯಾಕ್ಟ್ ಎಸ್‌ಯುವಿ ಎಲೆಕ್ಟ್ರಿಕ್ ಟ್ಯಾಕ್ಸಿಗಳು ಸೇರಿದಂತೆ ಶೇ.50 ಟ್ಯಾಕ್ಸಿಗಳು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: – ಉತ್ತರಾಖಂಡದಲ್ಲಿ ಸಿಲುಕ್ಕಿದ್ದ ಕರ್ನಾಟಕ ಮೂಲದ 9 ಚಾರಣಿಗರು ಸಾವು

ಗ್ರೀನ್, ರಿಫೆಕ್ಸ್ ಇವೀಲ್ ಮೂಲಕ ಏರ್‌ಪೋರ್ಟ್‌ನಲ್ಲಿ ಇವಿ ಟ್ಯಾಕ್ಸಿ ಒದಗಿಸುವ ಅವಕಾಶ ನಮಗೆ ದೊರೆತಿದೆ. ಈ ನೂತನ EV ಏರ್‌ ಪೋರ್ಟ್‌ ಟ್ಯಾಕ್ಸಿಗಳನ್ನು ಪ್ರಯಾಣಿಕರು ಸುಲಭವಾಗಿ ಬುಕ್ ಮಾಡಬಹುದು. ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಲ್ಲಿ ಹಾಗೂ ಬಳಕೆದಾರ ಸ್ನೇಹಿ BLR ಪಲ್ಸ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಬುಕ್‌ ಮಾಡಬಹುದು ಎಂದು ರಿಫೆಕ್ಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಜೈನ್ ವಿವರಣೇ ನೀಡಿದ್ದಾರೆ.

ಇನ್ನು ಪ್ರತಿ ಪ್ರಯಾಣಿಕರಿಗೆ ಡ್ಯೂಟಿ ಮ್ಯಾನೇಜರ್, ಸ್ಥಳೀಯ ಪೊಲೀಸ್ ಮತ್ತು ಅಂಬುಲೆನ್ಸ್ ಸೇವೆಗಳಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಒಳಗೊಂಡಿರುವ ಪೂರಕ ‘ಪಿಂಕ್ ಕಾರ್ಡ್’ ಅನ್ನು ಸಹ ಒದಗಿಸಲಾಗುತ್ತದೆ. ಇದರಿಂದ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಅರೆ-ರೊಬೊಟಿಕ್ ವಿಮಾನ ಟೋಯಿಂಗ್ ವಾಹನಗಳು ಮತ್ತು ಇವಿ ವಾಹನಗಳನ್ನು ಏರ್‌ಸೈಡ್ ಮತ್ತು ಲ್ಯಾಂಡ್‌ಸೈಡ್ ಎರಡೂ ಕಡೆಯಲ್ಲೂ ಅನುಷ್ಠಾನಗೊಳಿಸಲಾಗಿದೆ. ಹೀಗಾಗಿ ಬಿಎಲ್‌ಆರ್ ಏರ್‌ಪೋರ್ಟ್‌ನಲ್ಲಿರುವ ಎಲ್ಲಾ ವಾಹನಗಳನ್ನು ಸಮರ್ಥನೀಯ ಆಯ್ಕೆಗಳಿಗೆ ಪರಿವರ್ತಿಸುವ ದೀರ್ಘಾವಧಿಯ ದೃಷ್ಟಿಯೊಂದಿಗೆ BIAL ಹೊಂದಾಣಿಕೆಯನ್ನು ಮುಂದುವರೆಸಿದೆ. ಈ ಉಪಕ್ರಮಗಳು ಪ್ರಯಾಣಿಕರ ಯೋಗಕ್ಷೇಮಕ್ಕೆ ಆದ್ಯತೆ ನೀಡುವುದು ಮಾತ್ರವಲ್ಲದೆ ವಿಶಾಲವಾದ ಪರಿಸರಮಯ ವಾತಾವರಣ ನಿರ್ಮಾಣದ ಗುರಿ ಹೊಂದಿದ್ದು, ಎಲ್ಲರಲ್ಲೂ ಹಸಿರುಯುಕ್ತ ಭವಿಷ್ಯವನ್ನು ಉತ್ತೇಜಿಸುತ್ತವೆ . ವಿಶ್ವ ಪರಿಸರ ದಿನದ ಸ್ಮರಣಾರ್ಥ ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಂಪಸ್‌ನಲ್ಲಿ 100 ಸಸಿಗಳನ್ನು ನೆಡಲಾಯಿತು.

ಇದನ್ನೂ ಓದಿ: – ನಾಳೆ ಬೆಂಗಳೂರಿನ ನ್ಯಾಯಾಲಯಕ್ಕೆ ರಾಗಾ ಹಾಜರ್

Leave a Reply

Your email address will not be published. Required fields are marked *