ಪೂರ್ತಿ ಹದಗೆಟ್ಟು ಕೆಸರು ಗದ್ದೆಯಂತಾದ ತೂಬಗೆರೆ-ಮಂಚೇನಹಳ್ಳಿ ಗ್ರಾಮಸ್ಥರ ಆಕ್ರೋಶ

ದೊಡ್ಡಬಳ್ಳಾಪುರ (ತೂಬಗೆರೆ):- ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ತಾಲೂಕಿನ ತೂಬಗೆರೆ -ಮಂಚೇನಹಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ.

ಈ ಭಾಗದಲ್ಲಿ ಎರಡು ವಾರದಿಂದ ಸುರಿದ ಮಳೆಯಿಂದಾಗಿ ರಸ್ತೆ ಹದಗೆಟ್ಟಿದ್ದು, ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈ ಬಗ್ಗೆ ಗ್ರಾಮಸ್ಥರು ರಸ್ತೆ ದುರಸ್ಥಿ ಮಾಡಿಸುವಂತೆ ಸತತ ಮೂರ್ನಾಲ್ಕು ವರ್ಷದಿಂದ ಸಾಕಷ್ಟು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗು ಕೆಲ ದಿನಗಳ ಹಿಂದೆ ರಸ್ತೆಗೆ ತೇಪೆ ಹಾಕಿ ಕೈತೋಳೆದುಕೊಂಡಿದ್ದಾರೆ.

ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಬೇಸತ್ತ ಗ್ರಾಮಸ್ಥರು ಶುಕ್ರವಾರ ರಸ್ತೆಯಲ್ಲೇ ಪ್ರತಿಭಟನೆ ನಡೆಸಿ. ಈ ಮೂಲಕವಾದರೂ ಶಾಸಕರು ಹಾಗೂ ಸರ್ಕಾರ ಇತ್ತ ಗಮನ ಹರಿಸುತ್ತಾರೆಯೇ ಎಂಬುದು ಗ್ರಾಮಸ್ಥರ ಆಶಯವಾಗಿದೆ.ಗ್ರಾಮದ ಹದಗೆಟ್ಟ ರಸ್ತೆಯಿಂದಾಗಿ ವಾಹನಗಳುಸಂಚರಿಸುವುದು ಕಷ್ಟವಾಗಿದೆ. ಇದರಿಂದಾಗಿ ಮಕ್ಕಳು ಶಾಲೆಗೆ ಹೋಗಲು ಆಗುತ್ತಿಲ್ಲ.

ರಸ್ತೆ ಹಾಳಾಗಿರುವುದರಿಂದ ದಿನನಿತ್ಯ ಜೀವನ ನಡೆಸುವುದು ಸಹ ಕಷ್ಟವಾಗಿದೆ. ಅಲ್ಲದೇ ಸೋಮವಾರ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಗ್ರಾಮಸ್ಥರು ಹರಸಾಹಸವನ್ನೇ ಪಟ್ಟಿದ್ದಾರೆ. ಎಂದು ಪ್ರತಿಭಟನಾನಿರತರೊಬ್ಬರು ಮಾತನಾಡಿ ರಸ್ತೆಯ ಅವಸ್ಥೆಯನ್ನು ಖಂಡಿಸಿ, ಗ್ರಾಮಸ್ಥರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *