ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು- ಮೂವರ ದುರ್ಮರಣ

ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ. ತಡರಾತ್ರಿ ನಡೆದ ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯ ಲೈನ್‌‌ಮ್ಯಾನ್‌ಗಳಾದ ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂದು ಗುರುತಿಸಲಾಗಿದೆ.  ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಇದನ್ನೂ ಓದಿ: – ಸಿಎಂ ಡಿಸಿಎಂ ಎಷ್ಟು ನಾಟಕ ಮಾಡಿದ್ದಾರೆ ಅಂತ ನಿನ್ನೆ ನೀವೇ ತೋರಿಸಿದ್ದೀರಿ – ಹೆಚ್ ಡಿಕೆ

ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ.ಇನ್ನೂ ಕಾರಿನಲ್ಲಿದ್ದ ಶಿವಕುಮಾರ್‌ ಎಂಬಾತ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: – ಭವಾನಿ ರೇವಣ‍್ಣಗೆ ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

Leave a Reply

Your email address will not be published. Required fields are marked *