ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಂತರ ಬಸ್ಸು ಕಂದಕಕ್ಕೆ ಉರುಳಿದ್ದು ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಬಸ್ಸು ಕಂದಕಕ್ಕೆ ಬಿದ್ದ ಮೇಲೂ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ರಿಯಾಸಿಯಲ್ಲಿ ಬದುಕಿಳಿದ ವೈಷ್ಣೋದೇವಿ ಯಾತ್ರಾರ್ಥಿಗಳು ತಿಳಿಸಿದ್ದಾರೆ.

ಕೆಳಗೆ ಬಿದ್ದ ರಭಸಕ್ಕೆ ಬಸ್ ಗೆ ತೀವ್ರ ಹಾನಿಯಾಗಿದ್ದು, ಅಪಘಾತದ ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕುಡಲೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದ್ದಾರೆ. ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ಅವಿತ್ತಿದ್ದ ಉಗ್ರರು ಶಿವಖೋಡಿಯ ಗುಹಾ ದೇವಾಲಯದಿಂದ ವೈಷ್ಣೋದೇವಿಯ ಕ್ಷೇತ್ರವಾದ ಕಟ್ರಾಗೆ ಹಿಂದೂಗಳು ತೆರಳುತ್ತಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ರಸ್ತೆ ಬದಿಯಿಂದ ದಾಳಿ ನಡೆಸಿದ್ದ ಉಗ್ರರು ಕಂದಕಕ್ಕೆ ಬಿದ್ದ ನಂತರ ಬಸ್ಸು ಬಳಿ ಬಂದು ಹಲವು ನಿಮಿಷ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿಯಿಂದಾಗಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಕಂದಕಕ್ಕೆ ಬಿದ್ದಿದೆ. ಒಟ್ಟು 9 ಮಂದಿ ಮೃತಪಟ್ಟಿದ್ದು 33 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ.