ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಕೊಲೆ ಮಾಡಿದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದನು. ಚಿತ್ರದುರ್ಗದ  ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್‌ ಮಾಡಿದ್ದರು.  ಈ ಪೋಸ್ಟ್‌ ಮಾಡಿದ ನಂತರ ರೇಣುಕಾಸ್ವಾಮಿ ಅವರನ್ನು ಜೂನ್‌ 9 ಭಾನುವಾರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್‌ ನಿರಂತರ  ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಈ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಪೊಲೀಸ್‌ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್‌ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್‌ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *