ಆಂಧ್ರದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ

ಆಂಧ್ರಪ್ರದೇಶದಲ್ಲಿ ಇಂದು 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಇದೇ ವೇಳೆ ಪವನ್ ಕಲ್ಯಾಣ್ ಅವರು ನಾಯ್ಡು ಅವರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್‌. ಅಬ್ದುಲ್‌ ನಜೀರ್‌ ಪ್ರಮಾಣವಚನ ಬೋಧಿಸಿದರು.

ಒಟ್ಟು 23 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *