ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರ ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇಡೀ ಕರ್ನಾಟಕದಾದ್ಯಂತ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಚಲನ ಸೃಷ್ಟಿ ಮಾಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ.

ಕೇಸ್ ನಲ್ಲಿ ಪವಿತ್ರ ಗೌಡ ಎ1 ಆರೋಪಿಯಾದರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ. ಕೆಲವು ನಟ ನಟಿಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.