ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಜೂನ್ 24 ಅಧಿವೇಶನ ಶುರುವಾದರೆ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಅಧಿವೇಶನದ ಮೊದಲ ದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.