ಬಿಎಸ್ ವೈ ಬಂಧನಕ್ಕೆ ಸಿಐಡಿ ಸಿದ್ಧತೆ?

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪನವರನ್ನು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ. ಆಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ವರದಿಗಳ ಮೂಲ ತಿಳಿಸಿವೆ. 

ಅಷ್ಟೇ ಅಲ್ಲದೇ ಸಂತ್ರಸ್ತೆಯ ಪುತ್ರ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. 

Leave a Reply

Your email address will not be published. Required fields are marked *