ಅತ್ತೆಯ ಕಾಟಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅತ್ತೆಯ ಕಾಟಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಇನ್ನು ಮೃತ ರೂಪಾಬಾಯಿ ಪತಿಯಾದ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅತ್ತೆ ಸೇವಂತಾ ಸಿದರಾಯ ರೂಪನವರ ಅವರು ರೂಪಾಬಾಯಿಗೆ ದಿನ ಕಿರಿಕಿರಿ ಕೊಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೂಪಾಬಾಯಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *