ವಾಹನ ಸವಾರರಿಗೆ ಶಾಕ್‌ – ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದ ಹಾಗೆ ರಾಜ್ಯ ಸರ್ಕಾರ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ. ಕಚ್ಚಾ ತೈಲ ಬೆಲೆಗಳಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗಳನ್ನು ಉಂಟುಮಾಡುತ್ತವೆ. ಕಳೆದ ಬಾರಿ ಮಾರ್ಚ್‌ನಲ್ಲಿ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ 2 ರೂಪಾಯಿ ಇಳಿಕೆಯಾಗಿತ್ತು. 

Leave a Reply

Your email address will not be published. Required fields are marked *