ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾದ ನಂತರ ಇದೀಗ ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣಗೆ ಪೊಲೀಸರು ಸೋಟಿಸ್ ಜಾರಿ ಮಾಡಿದ್ದಾರೆ. ಜೂನ್ 8 ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು.

ಕೊಲೆಯಾದ ದಿನದಂದು ದರ್ಶನ್ ಮತ್ತು ಗ್ಯಾಂಗ್ ಸದಸ್ಯರು ಆರ್ಆರ್ ನಗರದ ಸ್ಟೋನಿಬ್ರೂಕ್ ಪಬ್ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದಾರೆ ಈ ಪಾರ್ಟಿಯಲ್ಲಿ ಚಿಕ್ಕಣ್ಣ ಸಹ ಭಾಗಿಯಾಗಿದ್ದರು. ಇದೇ ಕಾರಣಕ್ಕೆ ಚಿಕ್ಕಣ್ಣಗೆ ನೋಟಿಸ್ ಜಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಎಂದು ದರ್ಶನ್ ಹೊರಟಿದ್ದರು.

ಕೊಲೆ ವಿಚಾರವಾಗಿ ಪಬ್ನಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಹತ್ಯೆಯಾದ ದಿನವೇ ಚಿಕ್ಕಣ್ಣ ದರ್ಶನ್ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.