ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಇಂಧನ ಬೆಲೆ ಹೆಚ್ಚಳ ಮಾಡಿ ಆದೇಶಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು 3 ಮತ್ತು 3.05 ರೂಪಾಯಿಯಷ್ಟು ಹೆಚ್ಚಾಗಿದೆ.
ರಾಜ್ಯ ಸರ್ಕಾರದ ಈ ಕ್ರಮಕ್ಕೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಜೂನ್ 16 ರಂದು ವಿವಿಧ ಭಾಗಗಳಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ ನಮಗೆ ಮುಖ್ಯವಲ್ಲ. ನಮ್ಮ ರಾಜ್ಯದ ಜನರಿಗೆ ಅನುಕೂಲವಾಗಬೇಕು ಎಂದು ಉಪದೇಶ ಮಾಡುತ್ತಿದ್ದ ಸಿದ್ದರಾಮಯ್ಯನವರು ಈಗ ಅಧಿಕಾರಕ್ಕೆ ಬಂದಮೇಲೆ ಸಿಕ್ಕಾಪಟ್ಟೆ ಉಲ್ಟಾ ಹೊಡೆಯುತ್ತಿದ್ದಾರೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಕೇರಳ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಯಾಗದ ಬಗ್ಗೆ ಮಾತನಾಡಿದ್ದಾರೆ. ” ಕೇರಳದಲ್ಲಿ ಯಾರಾದರೂ ಮಾಟ ಮಂತ್ರ ಮಾಡಿಸಿದ್ದಾರಾ ಅಂತ ಡಿಕೆ ಶಿವಕುಮಾರ್ ಅವರನ್ನ ಒಮ್ಮೆ ವಿಚಾರಿಸಿ ನೋಡಿ ಸಿಎಂ ಸಿದ್ದರಾಮಯ್ಯನವರೇ” ಎಂದು ವ್ಯಂಗ್ಯವಾಡಿದರು.
ಸಿಎಂ ಸಿದ್ದರಾಮಯ್ಯ ಅವರು, ಸೆಪ್ಟೆಂಬರ್ 13, 2021ರಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡಸಿದ್ದರು. ಈ ವೇಳೆ ತಮ್ಮ ಟ್ವಿಟರ್ ಖಾತೆಯಲ್ಲಿ “ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ನಮಗೆ ಮುಖ್ಯವಲ್ಲ, ನಮ್ಮ ರಾಜ್ಯದ ಜನರಿಗೆ ಅನುಕೂಲವಾಗಬೇಕು, ಹಾಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕಡಿತ ಮಾಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.
ಇನ್ನು, ಸಿದ್ದರಾಮಯ್ಯ ಅವರು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಅಂಕಿ ಅಂಶಗಳಲ್ಲಿ ಸಮರ್ಥನೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು 29.84% ಮತ್ತು ಡೀಸೆಲ್ ಮೇಲೆ 18.44% ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದ ನಂತರವೂ, ಇಂಧನದ ಮೇಲಿನ ನಮ್ಮ ರಾಜ್ಯದ ತೆರಿಗೆಗಳು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳು ಮತ್ತು ಮಹಾರಾಷ್ಟ್ರದಂತಹ ಆರ್ಥಿಕ ಸಮೃದ್ಧ ರಾಜ್ಯಗಳಿಗಿಂತ ಕಡಿಮೆಯಾಗಿವೆ ಎಂದು ಆರ್ . ಅಶೋಕ್ ತಿಳಿಸಿದ್ದಾರೆ.