ಸರ್ಕಾರ ಜೀವಂತವಿದೆಯೋ ಇಲ್ಲವೋ ಎಂದು ಅನುಮಾನ ಮೂಡಿಸಿದೆ – ಗೋವಿಂದ ಕಾರಜೋಳ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ನಟ ದರ್ಶನ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಕರ್ನಾಟಕದಾದ್ಯಂತ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕೊಲ್ಲುವಾಗ ಸರ್ಕಾರ ಏನು ಮಾಡುತ್ತಿತ್ತು? ಸರ್ಕಾರ ಜೀವಂತವಿದೆಯೋ ಇಲ್ಲವೋ ಎಂದು ಅನುಮಾನ ಮೂಡಿಸಿದೆ ಎಂದು ಗೋವಿಂದ ಕಾರಜೋಳ ಕಾಂಗ್ರೆಸ್ ನವರಿಗೆ ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಜಿಲ್ಲೆಯ ಇಂಟೆಲಿಜೆನ್ಸ್ ಇಲಾಖೆ ಏನು ಮಾಡುತ್ತಿತ್ತು? ಈ ಕೇಸಲ್ಲಿ ಪೊಲೀಸ್ ಅಧಿಕಾರಿಗಳು ನಿಷ್ಕ್ರಿಯಗೊಂಡಿದ್ದು ಯಾಕೆ? ಈ ಸ್ಥಿತಿ ನೋಡಿದಾಗ ಸರ್ಕಾರ ಜೀವಂತ ಇಲ್ಲ ಎನ್ನಿಸಿದೆ ಎಂದು ಕಿಡಿಕಾರಿದ್ದಾರೆ.

ಸ್ಥಳೀಯ ಶಾಸಕರು 24 ಗಂಟೆಯೊಳಗೆ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಈವರೆಗೆ ತಿರುಗಿ ನೋಡಿಲ್ಲ, ಚಿತ್ರದುರ್ಗ ಉಸ್ತುವಾರಿ ಸಚಿವ ಸುಧಾಕರ್ ನಡೆಯನ್ನು ಖಂಡಿಸುತ್ತೇನೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

Leave a Reply

Your email address will not be published. Required fields are marked *