ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು – ಸಿದ್ದರಾಮಯ್ಯ

ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಒಬ್ಬರಿಗೊಬ್ಬರು ಶುಭಕೋರಿದರು. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.

ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಉಪಸ್ಥಿತರಿದ್ದರು. ಇದೇ ವೇಳೆ ಮುಸಲ್ಮಾನ ಮುಖಂಡರು ಸಿದ್ದರಾಮಯ್ಯರಿಗೆ ಅಮಾಮ್ ಶಾಲು (ಟೋಪಿ) ಹಾಕಿ ಸನ್ಮಾನ ಮಾಡಿದರು.

ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯನವರು ನೀವೆಲ್ಲರೂ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರುತ್ತೇನೆ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು.

ಇದು ಬಹುತ್ವದ ದೇಶ, ಎಲ್ಲಾ ಭಾಷೆ ಹಾಗೂ ಧರ್ಮಕ್ಕೆ ಸಮಾನತೆ ಕೊಡುವ ದೇಶ. ಮನುಷ್ಯತ್ವ ಬಹಳ ದೊಡ್ಡ ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಯಬೇಕು. ಆಗ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *