30 ಲಕ್ಷ ಹಣ ನೀಡಿರೋದಾಗಿ ನಟ ದರ್ಶನ್ ತಪ್ಪೊಪ್ಪಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕಲು ನಟ ದರ್ಶನ್ 30 ಲಕ್ಷ ಡೀಲ್ ಮಾಡಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ. ದರ್ಶನ್ ಹೇಳಿರುವ ಸ್ವ-ಇಚ್ಛಾ ಹೇಳಿಕೆಯನ್ನು ಪೊಲೀಸರು ರಿಮ್ಯಾಂಡ್ ಕಾಪಿಯಲ್ಲಿ ದಾಖಲಿಸಿದ್ದಾರೆ. 

ರೇಣುಕಾಸ್ವಾಮಿ ಮೃತದೇಹವನ್ನು ಸಾಗಿಸಲು ಜೊತೆಗೆ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಡೀಲ್ ಕೊಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸ್, ಲಾಯರ್ ಮತ್ತು ಶವ ಸಾಗಿಸೋ ವ್ಯಕ್ತಿಗಳಿಗೆ ತಗುಲುವ ವೆಚ್ಚವನ್ನ ಬರಿಸಲು ಪ್ರದೋಶ್‌ಗೆ 30 ಲಕ್ಷ ರೂ. ಹಣ ನೀಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ.

ಬೆಂಗಳೂರಿನ ಜಯಣ್ಣ ಶೆಡ್, ಮೈಸೂರಿನ ಹೋಟೆಲ್ ಮತ್ತು ಫಾರ್ಮ್ಹೌಸ್‌ನಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ. ಮೂರು ಬೈಕ್ ಸೀಜ್ ಮಾಡಿದ್ದಾರೆ. ಹತ್ಯೆ ದಿನದಂದು ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *