ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು – ಬಿ.ವೈ.ವಿಜಯೇಂದ್ರ

ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಸೈಕಲ್ ಜಾಥಾ ಮೂಲಕ ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ಆರಂಭಿಸಲಾಯಿತು.

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸೈಕಲ್‌ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಅವರು ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು.

ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು. ಬಿಜೆಪಿ ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ.

ಮುಖ್ಯಮಂತ್ರಿಗಳು ತಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *