ಜೈಲಿನಿಂದ ಬಿಡುಗಡೆಗೆ ಹೈಕೋರ್ಟ್‌ ತಡೆ -ಕೇಜ್ರಿವಾಲ್‌ ಗೆ ನಿರಾಸೆ

ಮಾರ್ಚ್‌ ತಿಂಗಳಲ್ಲಿ ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು. ದೆಹಲಿ ನ್ಯಾಯಾಲಯವೂ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಹಿನ್ನಡೆಯಾಗಿದೆ. ಜೈಲಿನಿಂದ ಕೇಜ್ರಿವಾಲ್‌ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್‌ ಮೊರೆ ಹೋಗಿತ್ತು. ನ್ಯಾ. ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಪೀಠವು ಅರ್ಜಿ ತುರ್ತು ವಿಚಾರಣೆ ನಡೆಸಿದ್ದು, ಜಾಮೀನು ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: – ಗಣಿ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಯೋಗ 

Leave a Reply

Your email address will not be published. Required fields are marked *