ದೊಡ್ಡಬಳ್ಳಾಪುರ ( ಹಾಡೋನಹಳ್ಳಿ ):ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೂಬಗೆರೆ ಹೋಬಳಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ, ನೂತನ ಸಂಸದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಸಂಸದ ಸುಧಾಕರ್ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ. ನಾನು ಮುಖ್ಯಮಂತ್ರಿಗಳಲ್ಲಿ ಈ ಕೂಡಲೇ ಮನವಿ ಮಾಡಿಕೊಳ್ಳುತ್ತೇನೆ ದಯವಿಟ್ಟು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇದಕ್ಕೂ ಮೊದಲು ತೂಬಗೆರೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನೂತನ ಸಂಸದರಿಗೆ ಅದ್ದೂರಿ ಸನ್ಮಾನ ಮಾಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಅಪ್ಪಯ್ಯಣ್ಣ, ಕುರುವಿಗೆರೆ ನರಸಿಂಹಯ್ಯ, ಮಾಜಿ ಶಾಸಕರುಗಳಾದ ಪಿಳ್ಳ ಮುನಿಶಾಮಪ್ಪ, ಚಂದ್ರಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ ಮುನೇಗೌಡ, ದೇವನಹಳ್ಳಿ ಜೆಡಿಎಸ್ ತಾಲೂಕು ಅಧ್ಯಕ್ಷರಾದ ಆರ್ ಮುನೇಗೌಡ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಎಚ್ ಎ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಬಿಜೆಪಿ ತೂಬಗೆರೆ ಹೋಬಳಿ ಅಧ್ಯಕ್ಷರಾದ ವಾಸುದೇವ್, ಮುಖಂಡರಾದ ದೇವರಾಜ್, ತೆಂಗು ನಾರಿನ ಮಹಾಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಯುವ ಮುಖಂಡ ಉದಯ್ ಆರಾಧ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.