ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾದ ತಮಿಳುನಾಡು ಸಚಿವ ಉದಯ ಸ್ಟಾಲಿನ್

ಬೆಂಗಳೂರು: ಸನಾತನ ಧರ್ಮ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಮಂಗಳವಾರ ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ ಉದಯನಿಧಿ, ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

Leave a Reply

Your email address will not be published. Required fields are marked *