ಮೂವರಿಗೆ 6 ವರ್ಷದ ಬಳಿಕ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ.

ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ಕೋರ್ಟ್‌ ಹಲವು ಷರತ್ತು ವಿಧಿಸಿದ್ದು ಈ ಷರತ್ತು ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *