ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಗೆ ಇನ್ನು ಕೇವಲ 8 ಅಡಿ ಮಾತ್ರ ಬಾಕಿ ಇದೆ. ಒಂದು ವಾರದಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಇದರಿಂದ ದಿನೇ ದಿನೇ ಕೆಆರ್‌ಎಸ್ ಅಣೆಕಟ್ಟಿಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇಂದು ಕೆಆರ್‌ಎಸ್ ಡ್ಯಾಂಗೆ 44,617 ಕ್ಯುಸೆಕ್ ನೀರು ಬರುತ್ತಿದೆ. ಇದರಿಂದ 124.80 ಅಡಿ ಗರಿಷ್ಠ ಅಡಿಯ ಕೆಆರ್‌ಎಸ್ ಡ್ಯಾಂ 116.60 ಅಡಿ ಭರ್ತಿಯಾಗಿದೆ.

ಇನ್ನೂ ಡ್ಯಾಂನಲ್ಲಿ 38.900 ಟಿಎಂಸಿ ನೀರು ಶೇಖರಣೆ ಆಗಿದ್ದು, ಇನ್ನೂ 11 ಟಿಎಂಸಿ ನೀರು ಬಂದರೆ 49.452 ಟಿಎಂಸಿ ಶೇಖರಣೆ ಆಗಿ ಸಂಪೂರ್ಣ ಭರ್ತಿಯಾಗಲಿದೆ. ಇಂದು ಕೆಆರ್‌ಎಸ್ ಡ್ಯಾಂನಿಂದ 2,566 ಕ್ಯುಸೆಕ್ ನೀರನ್ನು ನಾಲೆ ಹಾಗೂ ಕುಡಿಯಲು ಬಿಡಲಾಗುತ್ತಿದೆ.
ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ