ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ 5 ದಿನಕ್ಕೆ 15 ಟಿಎಂಸಿ ನೀರು ಸಂಗ್ರಹವಾಗಿದ್ದು, ನಾಳೆ (ಭಾನುವಾರ) ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ.
ಸದ್ಯ 124.80 ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 120 ಅಡಿ ಭರ್ತಿಯಾಗಿದೆ. ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿ ಇದ್ದು, ನಾಳೆ ಸಂಜೆಯೇ ಸಂಪೂರ್ಣವಾಗಿ ಡ್ಯಾಂ ಭರ್ತಿಯಾಗಲಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ನದಿಗೆ 4,714 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ.
ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ