ಮಕ್ಕಳೊಂದಿಗೆ ಬಿಸಿಊಟ ಸವಿದ ನಾಟ್ಯ ಮಯೂರಿ

ವಿಜಯಪುರ : ಸರ್ಕಾರಿ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ಮದ್ಯಾಹ್ನ ಬಿಸಿಊಟ ಸೇವಿಸುತ್ತಿರುವ ಸಮಯದಲ್ಲಿ ಹಾರಿ ಬಂದ ರಾಷ್ಟ್ರಪಕ್ಷಿ ನವಿಲು ಮಕ್ಕಳೊಂದಿಗೆ ಬಿಸಿಊಟ ಸವಿದು ಮಕ್ಕಳಿಗೆ ಮನೋಲ್ಲಾಸ ಹೆಚ್ಚಿಸಿದ ಘಟನೆ ನಡೆದಿದೆ. ವಿಜಯಪುರ ತಾಲ್ಲೂಕಿನ ಜಂಬಗಿ (ಆ) ಗ್ರಾಮದ ಕೆರೂರವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ವಸ್ತಿ ಶಾಲಾ ಮಕ್ಕಳು ಬಿಸಿಊಟ ಸೇವಿಸುವಾಗ ಹಾರಿ ಬಂದ ರಾಷ್ಟ್ರ ಪಕ್ಷಿ ಮಕ್ಕಳು ತಟ್ಟೆಯಲ್ಲಿ ಅನ್ನ ಹಾಕಿಕೊಂಡು ಪ್ರಾರ್ಥನೆ ಮಾಡುತ್ತಾ ಕುಳಿತಾಗ ಅನ್ನದ ತಟ್ಟೆ ಕಡೆಗೆ ಸಾಗಿದೆ.

ಈ ಸಮಯದಲ್ಲಿ ವಿಧ್ಯಾರ್ಥಿನಿಯೋರ್ವಳು ತನ್ನ ತಟ್ಟೆಯನ್ನು ನವಿಲಿಗೆ ಕೊಟ್ಟು ಬೇರೊಂದು ತಟ್ಟೆ ತೆಗೆದುಕೊಂಡಿದ್ದಾಳೆ. ವರ್ಗದ ಕೋಣೆಯ ಹತ್ತಿರವು ಬಂದ ನಾಟ್ಯ ಮಯೂರಿ ಧಾನ್ಯಗಳನ್ನು ಸವಿದು ತನ್ನ ಹಸಿವನ್ನು ನೀಗಿಸಿಕೊಂಡಿದೆ.
ಶಾಲಾ ಆವರಣವು ಹಚ್ಚ ಹಸಿರಿನ ಗಿಡಗಳ ಮಧ್ಯೆ ಸುಂದರ ಪ್ರಕೃತಿ ಸೌಂದರ್ಯ ಹೊಂದಿದ್ದು, ಪ್ರತಿದಿನ ಮಕ್ಕಳು ಈ ಪ್ರಕೃತಿ ಮಡಿಲಲ್ಲಿ ಊಟ ಸೇವಿಸುತ್ತಾರೆ. ಹಸಿರು ತುಂಬಿದ ವಾತಾವರಣದಲ್ಲಿ ರಾಷ್ಟ್ರಪಕ್ಷಿ ಆಗಮಿಸಿದ್ದರಿಂದ ವಿಧ್ಯಾರ್ಥಿಗಳು ಫುಲ್ ಖುಷ್ ಆಗಿದ್ದಾರೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *