ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.

ಸೆಮ್ಮಂಚೇರಿ ಕುಪ್ಪಂ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಟ್ರಕ್‌ನ ಹಿಂಬದಿಯ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಕೆಟ್ಟು ಹೋಗಿದ್ದರಿಂದ ರಸ್ತೆ ಬದಿ ನಿಂತಿತ್ತು. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *