ಮೈಸೂರಿನ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿದ್ದಾರೆ. 80 ಸಾವಿರ ಮತಗಳ ಲೀಡ್ ಬರುತ್ತಿದ್ದಂತೆ ಯದುವೀರ್, ಸಂಸದರು ಎಂಬ ನಾಮಫಲಕಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ ಯದುವೀರ್ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

ಲೀಡ್ ಬರುತ್ತಿದ್ದಂತೆ ಅಭಿಮಾನಿಗಳು ನಾಮಫಲಕ ಮಾಡಿಸಿ ಪೂಜೆ ಸಲ್ಲಿಸಿದ್ದಾರೆ. ವೈರಲ್ ಆಗಿರುವ ಫೋಟೋದಲ್ಲಿ ಯದುವೀರ್ ಕೃಷ್ಣದತ್ತ ಒಡೆಯರ್, ಸಂಸದರು, ಮೈಸೂರು – ಕೊಡಗು ಕ್ಷೇತ್ರ ಎಂದು ಬರೆಸಲಾಗಿದೆ. ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಎಂ.ಲಕ್ಷ್ಮಣ್ ಕಣಕ್ಕಿಳಿದಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -343636 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್-439967 ಮತಗಳಿಸಿ 96331 ಮತಗಳ ಮುನ್ನಡೆಯಲ್ಲಿದ್ದಾರೆ. 7,61,184 ಮತಗಳ ಎಣಿಕೆ ಪೂರ್ಣಗೊಂಡಿದ್ದು, 14,77,751 ಮತ ಚಲಾವಣೆಯಾಗಿತ್ತು.
ಇದನ್ನೂ ಓದಿ : – ಬೆಂಗಳೂರು ಗ್ರಾಮಾಂತರದಲ್ಲಿ ಡಾ ಮಂಜುನಾಥ್ ಗೆಲುವು ನಿಶ್ಚಿತ – ಮುನಿರತ್ನ