ದೆಹಲಿ ಕಡೆಗೆ ಹೆಚ್‌ಡಿಕೆ ಪಯಣ

ಲೋಕಸಭಾ ಚುನಾವಣೆಯಲ್ಲಿ JDS ನಿಂದ ಹೆಚ್‌ ಡಿ ಕುಮಾರಸ್ವಾಮಿ ಮತ್ತೊಮ್ಮೆ ಗೆದ್ದು ಸಂಸತ್ ಗೆ ಪ್ರವೇಶಿಸಿದ್ದಾರೆ. ಮಂಡ್ಯದ ನೂತನ ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಯವರು ದೆಹಲಿಗೆ ತೆರಳಿದ್ದಾರೆ. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಿವೆ ಅದರಲ್ಲಿ NDA 19 ಸ್ಥಾನಗಳನ್ನು ಪಡೆದುಕೊಂಡಿದೆ. BJP 17 ಮತ್ತು JDS 2ರಲ್ಲಿ ಗೆದ್ದಿದೆ.

2019 ರಲ್ಲಿ ಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯೊಂದಿಗೆ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. 2019 ರಲ್ಲಿ ಕಾಂಗ್ರೆಸ್ ಒಂದು ಸ್ಥಾನದಿಂದ ಈ ಬಾರಿ ಒಂಬತ್ತಕ್ಕೆ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.

ದೆಹಲಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್. ಡಿ. ಕೆ ರಾಷ್ಟ್ರ ರಾಜಧಾನಿಯಲ್ಲಿ NDA ಘಟಕಗಳ ಸಭೆ ನಡೆಯಲಿದ್ದು, JDS ಪರವಾಗಿ ನಾನು ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮಂಡ್ಯದಿಂದ NDA ಅಭ್ಯರ್ಥಿಯಾಗಿ ಗೆದ್ದಿದ್ದಾರೆ.  ಆದರೆ ಹಾಸನದಿಂದ JDS ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ  ಶ್ರೇಯಸ್ ಪಟೇಲ್ ವಿರುದ್ದ ಸೋತಿದ್ದಾರೆ. ಸಂಜೆ ಖಾಸಗಿ ಹೋಟೆಲಿನಲ್ಲಿ NDA ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಿದ್ದಾರೆ.

Leave a Reply

Your email address will not be published. Required fields are marked *