ಹಾಸನದಲ್ಲಿ ರೌಡಿ ಶೀಟರ್ ಭೀಕರ ಹತ್ಯೆ

ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ಬೆಳಗ್ಗೆ ರವಿ ಬೈಕ್ ​ನಲ್ಲಿ ಕುಡಿಯುವ ನೀರು ತೆಗೆದುಕೊಂಡು ತೆರಳುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಠಾತ್ ದಾಳಿಯಿಂದ ತಪ್ಪಿಸಿಕೊಳ್ಳಲು ಆಗದೆ ದುಷ್ಕರ್ಮಿಗಳ ಕೈಗೆ ಸಿಲುಕಿ ಚೈಲ್ಡ್ ರವಿ ಭೀಕರವಾಗಿ ಹತ್ಯೆಯಾಗಿದ್ದಾನೆ. ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. 2 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದನು. ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: – MODI : ಜೂನ್‌ 8 ರಂದು ಮೋದಿ ಪ್ರಮಾಣವಚನ ಸ್ವೀಕಾರ

Leave a Reply

Your email address will not be published. Required fields are marked *