ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಪುರುಷತ್ವ ಪರೀಕ್ಷೆಗೊಳಪಡಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ  ಪ್ರಜ್ವಲ್ ಅವರಿಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ.

ಪ್ರಜ್ವಲ್ ಅವರಿಂದ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಬೆಳಗ್ಗೆ 11 ಗಂಟೆ ವೇಳೆಗೆ ಶಿವಾಜಿ ವಾಜಪೇಯಿ ವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋದ ಅಧಿಕಾರಿಗಳು ಸಂಜೆ 5 ಗಂಟೆ ತನಕ ಪುರುಷತ್ವ ಪರೀಕ್ಷೆ ಸೇರಿದಂತೆ ತನಿಖೆಗೆ ಅಗತ್ಯ ವಿರುವ ಹಲವು ಪರೀಕ್ಷೆಗಳನ್ನು ನಡೆಸಿದರು. ಆರೋಪಿಯಾದ ಪ್ರಜ್ವಲ್ ರೇವಣ್ಣನನ್ನು 6 ದಿನಗಳಿಂದ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ  ಅಧಿಕಾರಿಗಳು ಹೈರಾಣಾಗಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಪ್ರಶ್ನೆ ಕೇಳಿದ್ರು ರೆಡಿಮೇಟ್ ಉತ್ತರ ಕೊಡ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪವನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದು, ಅದರ ಭಾಗವಾಗಿ ನ್ಯಾಯಾಲಯದ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸಿದ್ದಾರೆ.

Leave a Reply

Your email address will not be published. Required fields are marked *