ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ನೀಡಿದೆ. ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿನೆ ನೀಡಿದೆ.

ರಾಜ್ಯಾದ್ಯಂತ ಸದ್ದು ಮಾಡಿದ್ದ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳು ಇರುವ ಪೆನ್ಡ್ರೈನ್ ನಲ್ಲಿ ತಮ್ಮ ತಾಯಿಯ ಚಿತ್ರವು ಇದೆ. ಸದ್ಯ ನಮ್ಮ ತಾಯಿ ಕಣ್ಮರೆ ಆಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಇದೇ ಪ್ರಕರಣ ವಿಚಾರವಾಗಿ ಎಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಸಂಬಂಧಿಯನ್ನು ಬಂಧಿಸಿ ಎರಡನೇ ಆರೋಪಿಯಾಗಿ ಮಾಡಲಾಗಿದೆ. ಭವಾನಿ ಅವರನ್ನು ಎಸ್ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ಇದನ್ನೂ ಓದಿ: – ಸಿಎಂ ಡಿಸಿಎಂ ಎಷ್ಟು ನಾಟಕ ಮಾಡಿದ್ದಾರೆ ಅಂತ ನಿನ್ನೆ ನೀವೇ ತೋರಿಸಿದ್ದೀರಿ – ಹೆಚ್ ಡಿಕೆ