ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆಯಾದ ಕಂಗನಾ ರನೌತ್ ಅವರಿಗೆ ಸಿಐಎಸ್ಎಫ್ ಮಹಿಳಾ ಯೋಧೆ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಐಎಸ್ಎಫ್ ಮಹಿಳಾ ಯೋಧೆ ವಿರುದ್ದ ಪೊಲೀಸ್ ಪ್ರಕರಣ ದಾಖಲಾಗಿದ್ದು ಸಿಬ್ಬಂದಿಯನ್ನು ಬಂಧಿಸಲಾಗಿದೆ. ದೆಹಲಿಯಲ್ಲಿ ರೈತರ ಆಂದೋಲನವನ್ನು ಕಂಗನಾ ರನೌತ್ ಟೀಕಿಸಿದ್ದರು. ಈ ಟಿಕೆಯಿಂದ ಆಕೆಗೆ ಥಳಿಸಲಾಗಿದೆ ಎಂದು ಮಹಿಳಾ ಯೋಧ ಹೇಳಿರುವ ವಿಡಿಯೋ ಹರಿದಾಡಿದೆ.

2020ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬೃಹತ್ ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ನಟಿ ಕಂಗನಾ, ರೈತರು 100 ರೂ.ಗೆ ಅಲ್ಲಿ ಕುಳಿತಿದ್ದಾರೆ ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ವ್ಯಾಪಕ ಟೀಕೆ ವ್ಯಕ್ತವಾದ ನಂತರ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು. ನಟಿ ಈ ಹೇಳಿಕೆ ನೀಡಿದಾಗ ತನ್ನ ತಾಯಿ ಅಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ನಟಿ ಹೇಳಿಕೆಯಿಂದ ನೋವುಂಟಾಗಿದ್ದು, ಕಪಾಳಮೋಕ್ಷ ಮಾಡಿದೆ ಎಂದು ಕೌರ್ ಆಕ್ರೋಶ ಹೊರಹಾಕಿದ್ದಾರೆ. ಘಟನೆಗೂ ಮುನ್ನ ಕಂಗನಾ ತನ್ನ ಇನ್‌ಸ್ಟಾಗ್ರಾಂನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ತಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದರು.
ಇದನ್ನೂ ಓದಿ:- ಶ್ರೀ ಕ್ಷೇತ್ರ ಗೋಕರ್ಣ ಮಹಾಬಲೇಶ್ವರ ಮಂದಿರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ