ಕರ್ನಾಟಕದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸರ್ಕಾರ ಅವಕಾಶ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಚರ್ಚೆ ಆರಂಭವಾಗಿದೆ. ನಾಲ್ಕೂ ನಿಗಮಗಳು ಕನಿಷ್ಠ ಶೇ.10ರಿಂದ 15ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಶೀಘ್ರವೇ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆಯಿದೆ.

ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ವರ್ಷದಿಂದ ವರ್ಷಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿದೆ. ಡೀಸೆಲ್ ಬೆಲೆ 2020 ರಲ್ಲಿ ಲೀಟರ್ ಗೆ 61 ರೂಪಾಯಿ ಇತ್ತು, ಈಗ ಅದು ಸುಮಾರು 90 ರೂಪಾಯಿಗೆ ಏರಿದೆ, ಸುಮಾರು ಶೇಕಡಾ 50ರಷ್ಟು ಹೆಚ್ಚಳವಾಗಿದೆ. ಶೇಕಡಾ 25ರಿಂದ 30ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಬಸ್ ನಿಗಮದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಟಿಕೆಟ್ ದರವನ್ನು ಹೆಚ್ಚಿಸುವಂತೆ ನಾವು ರಾಜ್ಯ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದೇವೆ. ನಮ್ಮ ಗಳಿಕೆಯ ಶೇಕಡಾ 45 ಕ್ಕಿಂತ ಹೆಚ್ಚು ಡೀಸೆಲ್ಗೆ ಹೋಗುತ್ತದೆ, ಅದರ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಹೆಚ್ಚಾಗಿದೆ. ಈ ಹಿಂದೆ ದಿನಕ್ಕೆ 3 ಕೋಟಿ ಖರ್ಚಾಗುತ್ತಿತ್ತು. ಆದರೆ ಈಗ 5 ಕೋಟಿಗೂ ಹೆಚ್ಚು ಖರ್ಚು ಮಾಡಬೇಕಾಗಿದೆ. ನಮ್ಮ ಆರ್ಥಿಕ ಸಂಪನ್ಮೂಲಗಳನ್ನು ನಾವು ಹೇಗೆ ನಿರ್ವಹಿಸಬಹುದು ಎಂದು ಪರಿಹಾರಗಳನ್ನು ಹುಡುಕುತ್ತಿದ್ದೇವೆ ಎಂದು ಹೇಳಿದರು.