ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ!

ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಜೂನ್ 12ನೇ ತಾರೀಕಿನ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ದೇಶದ ವಾಯುವ್ಯ ಭಾಗದ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಭಾಗದಲ್ಲಿ ಮೇ 13 ರವರೆಗೆ ಮತ್ತು ರಾಜಸ್ಥಾನದಲ್ಲಿ ಮೇ 12 ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಜರಾತಿನ ಕರಾವಳಿ ಪ್ರದೇಶಗಳಲ್ಲಿ ಮೇ 14 ರವರೆಗೆ ಬಿಸಿ ಮತ್ತು ಆರ್ದ್ರ ವಾತಾವರಣವು ಮುಂದುವರಿಯಲಿದೆ.

ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

Leave a Reply

Your email address will not be published. Required fields are marked *