ಕನ್ನಡ ಚಿತ್ರರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ

ಜೆಡಿಎಸ್ ಯುವ‍ಘಟಕ ರಾಜ್ಯಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಕನ್ನಡ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಚಿಕ್ಕಬಾಣಸವಾಡಿ ಗ್ರಾಮದಲ್ಲಿ ಮಾತನಾಡಿದ ಅವರು ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದ್ದಾರೆ.

ಸಿನಿಮಾ ರಂಗವನ್ನು ಪೂರ್ಣವಾಗಿ ಬಂದ್ ಮಾಡಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ. ಚುನಾವಣೆಯಲ್ಲಿ ತಾಂತ್ರಿಕವಾಗಿ ನಾನು ಸೋತಿರಬಹುದು, ಆದರೆ ಆ ಸೋಲು ಸೋಲಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ರಾಜ್ಯಕ್ಕೆ‌ ಕೊಟ್ಟಿರುವ ಕೊಡುಗೆ ಅಪಾರ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಣ್ಣ ನಿಲ್ಲಬೇಕು ಎಂಬ ಜನರ ಅಪೇಕ್ಷೆ ಮೇರೆಗೆ ನಿಂತರು. ಎಲ್ಲಾ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ.

ಇನ್ನ‌ ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡ್ತಾರೆ. ಎಂಟು ವಿಧಾನಸಭಾ ಕ್ಷೇತ್ರದ ಜನರಿಗೆ ಕೃತಜ್ಞತೆ ಹೇಳ್ತೇನೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು ಗಂಡಸ್ತನದ ಬಗೆಗೆ ಮಾತಾಡ್ತಿದ್ದರು. ಈಗ ಜನ ಉತ್ತರ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *