ಹಾವೇರಿಯಲ್ಲಿ ಅಗ್ನಿ ಅವಘಡ – 5 ಅಂಗಡಿಗಳು ಬೆಂಕಿಗೆ ಭಸ್ಮ

ಆಕಸ್ಮಿಕ ಬೆಂಕಿಗೆ ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ‍‍ಫೂಟ್‌ ವೇರ್ ಅಂಗಡಿಯಿಂದ ಬರುತ್ತಿದ್ದ ದಟ್ಟವಾದ ಹೊಗೆಯನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇಲೆಕ್ಟ್ರಿಕಲ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಫೂಟ್‌ವೇರ್ ಮತ್ತು ಹೊಟೇಲ್‌ಗೆ ಬೆಂಕಿ ಬಿದ್ದಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಹಿರೇಕೆರೂರು ಶಾಸಕ ಯುಬಿ ಬಣಕಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *